ತುಮಕೂರು, ಜು 26 (DaijiworldNews/HR): ತುಮಕೂರಿನ ಗೊಲ್ಲರಹಟ್ಟಿಯಲ್ಲಿ ಮೈಲಿಗೆ ಎಂದು ಬಾಣಂತಿ ಹಾಗೂ ಮಗುವನ್ನ ಕುಟುಂಬಸ್ಥರು ಊರ ಹೊರಗಿಟ್ಟಿದ್ದರಿಂದ ಅನಾರೋಗ್ಯಕ್ಕೆ ತುತ್ತಾಗಿ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಿದ್ದೇಶ್ ಮತ್ತು ವಸಂತಾ ದಂಪತಿಯ ಮಗುವು ಶೀತದಿಂದ ಬಳಲುತ್ತಿದ್ದು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.
ಇನ್ನು ಕುಟುಂಬಸ್ಥರು ಮೈಲಿಗೆ ಎಂಬ ಕಾರಣದಿಂದ ಬಾಣಂತಿ ಹಾಗೂ ಮಗುವನ್ನು ಊರ ಹೊರಗಿಟ್ಟಿದ್ದು, ಗಾಳಿ, ಮಳೆ ಇದ್ದರೂ ಕೂಡ ಮಗು ಮತ್ತು ತಾಯಿಯನ್ನು ಊರ ಹೊರಗೆ ಇರಿಸಲಾಗಿತ್ತು. ಇದರಿಂದ ಮಗುವಿಗೆ ಅನಾರೋಗ್ಯ ಕಾನಿಸಿಕೊಂಡಿತ್ತು ಎನ್ನಲಾಗಿದೆ.
ವಸಂತ ಕಳೆದ ತಿಂಗಳು ಜೂನ್ 22ರಂದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ಏಳು ತಿಂಗಳಲ್ಲಿ ಹೆರಿಗೆ ಆಗಿದ್ದರಿಂದ ಒಂದು ಮಗು ಸಾವನ್ನಪ್ಪಿದ್ದರೆ, ಇನ್ನೊಂದು ಮಗು ಬದುಕುಳಿದಿತ್ತು.