ಬೆಂಗಳೂರು, ಜು 27 (DaijiworldNews/MS): ಉಡುಪಿ ಕಾಲೇಜೊಂದರ ವಾಶ್ ರೂಮೊಂದರಲ್ಲಿ ಯುವತಿಯೊಬ್ಬಳ ವಿಡಿಯೋ ಚಿತ್ರೀಕರಿಸಿರುವ ಆರೋಪದ ಪ್ರಕರಣ ಕುರಿತು ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿರುವ ಗೃಹ ಸಚಿವ ಪರಮೇಶ್ವರ್ ವಿಡಿಯೋ ಚಿತ್ರೀಕರಣ ಮಕ್ಕಳ ಆಟವೆಂದು ಹೇಳಿಲ್ಲ ಎಂದು ಹೇಳಿದ್ದಾರೆ.
ಇಂತಹ ಘಟನೆಗಳು ಸ್ನೇಹಿತರ ಬಳಗದಲ್ಲಿ ನಡೆಯುತ್ತದೆ, ಅದೆಲ್ಲ ಅಲ್ಲಿಗೆ ಬಿಟ್ಟು ಹೋಗುತ್ತಿತ್ತು ಎಂದು ಹೇಳಿದ್ದು, ಅಂತಹ ಘಟನೆ ಕುರಿತು ಪ್ರಾಂಶುಪಾಲರು ಕ್ರಮ ಕೈ ತೆಗೆದುಕೊಳ್ಳಲು ಬಿಡಬೇಕು. ಇಲ್ಲಿಸಸ್ಪೆಂಡ್ ಮಾಡುವುದೋ ಅಥವಾ ಇನ್ನು ಹೆಚ್ಚಿನ ಕ್ರಮ ಬೇಕೋ ಇದೆಲ್ಲವೂ ಅವರಿಗೆ ಸಂಬಂಧಪಟ್ಟಿದ್ದು ಎಂದು ಹೇಳಿದ್ದಾರೆ.
ನಾವು ಕಾಲೇಜು ವಿಚಾರಕ್ಕೆ ಮಧ್ಯಪ್ರವೇಶ ಮಾಡಬಾರದು ಇನ್ನು ಘಟನೆ ಕುರಿತು ಈಗಾಗಲೇ ಪೊಲೀಸರು ಸೊಮೋಟೋ ದಾಖಲಿಸಿಕೊಂಡಿದ್ದಾರೆ. ತನಿಖೆ ಆಗುತ್ತೆ, ಸತ್ಯಾ ಸತ್ಯತೆ ಹೊರ ಬರುತ್ತೆ ಎಂದಿದ್ದಾರೆ.