ಮಹಾರಾಷ್ಟ್ರ ಜು 30 (DaijiworldNews/AK): 50 ಮಂದಿ ಪ್ರಯಾಣಿಕರಿದ್ದ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ ಎಂದು ಥಾಣೆ ಮುನ್ಸಿ ಪಲ್ ಕಾರ್ಪೊರೇಷನ್ನ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತದ್ವಿ ತಿಳಿಸಿದ್ದಾರೆ.
50 ಮಂದಿ ಪ್ರಯಾಣಿಕರನ್ನು ಹೊತ್ತ ಥಾಣೆ ಮುನಿಸಿಪಲ್ ಟ್ರಾನ್ಸ್ಪೋರ್ಟ್ ಬಸ್ ನಾರ್ಪೋಲಿಯಿಂದ ಚೆಂದನಿ ಕೋಳಿವಾಡಕ್ಕೆ ತೆರಳುತ್ತಿದ್ದಾಗ ಸೆಂಟ್ರಲ್ ಮೈದಾನದ ಬಳಿ ಬೆಳಗ್ಗೆ 8.30ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಪ್ರಯಾಣಿಕರಿಗೆ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಬಸ್ ಚಾಲಕ ಮತ್ತು ಕಂಡಕ್ಟರ್ ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ ಎನ್ನಲಾಗುತ್ತಿದೆ. ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಮತ್ತು ವಿಪತ್ತು ನಿರ್ವಹಣಾ ಘಟಕದ ತಂಡವು ಎಚ್ಚರಿಕೆ ನೀಡಿದ ನಂತರ ಸ್ಥಳಕ್ಕೆ ಧಾವಿಸಿ 15 ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬಸ್ಗೆ ಭಾಗಶಃ ಹಾನಿಯಾಗಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.