ನವದೆಹಲಿ, ಜು 30 (DaijiworldNews/HR): 4,000ಕ್ಕೂ ಅಧಿಕ ಮುಸ್ಲಿಂ ಮಹಿಳೆಯರು ಈ ವರ್ಷ 'ಮೆಹ್ರಮ್' ಇಲ್ಲದೆ ಹಜ್ ಯಾತ್ರೆ ಕೈಗೊಂಡಿರುವುದು ದೊಡ್ಡ ಪರಿವರ್ತನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮನ್ ಕಿ ಬಾತ್ ರೇಡಿಯೋ ಪ್ರಸಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಹಜ್ ಯಾತ್ರೆಯಿಂದ ಹಿಂದಿರುಗಿದ ಮುಸ್ಲಿಂ ತಾಯಂದಿರು ಮತ್ತು ಸಹೋದರಿಯರಿಂದ ಈ ಬಾರಿ ಹೆಚ್ಚಿನ ಸಂಖ್ಯೆಯ ಪತ್ರಗಳನ್ನು ಸ್ವೀಕರಿಸುವರು ಎಂದರು.
ಇನ್ನು ಕಳೆದ ಕೆಲ ವರ್ಷಗಳಿಂದ ತಮ್ಮ ಸರಕಾರವು ಹಜ್ ನೀತಿಯಲ್ಲಿ ಮಾಡಿದ ಬದಲಾವಣೆಗಳೊಂದಿಗೆ ಹೆಚ್ಚು ಹೆಚ್ಚು ಜನರು ವಾರ್ಷಿಕ ಪವಿತ್ರ ಯಾತ್ರೆಗೆ ಹೋಗಲು ಅವಕಾಶವನ್ನು ಪಡೆಯುತ್ತಿದ್ದಾರೆ. ಈ ಹಿಂದೆ ಮುಸ್ಲಿಂ ಮಹಿಳೆಯರಿಗೆ 'ಮೆಹರಂ' ಇಲ್ಲದೆ ಹಜ್ ಯಾತ್ರೆ ಮಾಡಲು ಅವಕಾಶವಿರಲಿಲ್ಲ. ಮನ್ ಕಿ ಬಾತ್ ಮೂಲಕ, ನಾನು ಸೌದಿ ಅರೇಬಿಯಾ ಸರಕಾರಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದಾರೆ.