ಮಲಪ್ಪುರಂ, ಜು 30 (DaijiworldNews/MS): ಮಂಡಿನೋವಿಗೆ ಕೇರಳದ ಕೋಟಕ್ಕಲ್ ಆರ್ಯುವೇದ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ.
ಈ ಬಗ್ಗೆ ಫೇಸ್ಬುಕ್ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ 'ಕೋಟಕ್ಕಲ್ ಆರ್ಯ ವೈದ್ಯ ಶಾಲೆಯಲ್ಲಿ ತಂಗಿದ್ದು ನನಗೆ ಹೊಸ ಚೈತನ್ಯದ ಅನುಭವವಾಗಿದೆ ಎಂದು ಫೇಸ್ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದು, ಚಿಕಿತ್ಸೆ ಪಡೆದ ಬಳಿಕ ದೆಹಲಿಗೆ ಮರಳಿದ್ದಾರೆ.
ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಹಂಚಿಕೊಂಡ ಪ್ರೀತಿ ಮತ್ತು ಕಾಳಜಿಗಾಗಿ ಡಾ. ಪಿ.ಎಂ.ವಾರಿಯರ್ ಮತ್ತು ಇತರ ವೈದ್ಯ ಹಾಗೂ ಸಿಬ್ಬಂದಿಗಳಿಗೆ ನನ್ನ ಧನ್ಯವಾದಗಳು ಎಂದಿದ್ದಾರೆ.
ಭಾರತ್ ಜೋಡೋ ಯಾತ್ರೆಯ ಬಳಿಕ ರಾಹುಲ್ ಮಂಡಿನೋವು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಹೇಳಲಾಗಿದೆ