ಬೆಂಗಳೂರು,ಏ08(AZM):ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟೈಮ್ಸ್ ನೌ ಮತ್ತು ವಿಎಂಆರ್ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು ಇಂದು ವರದಿ ಬಿಡುಗಡೆಗೊಳಿಸಿದೆ.
ಟೈಮ್ಸ್ ನೌ ಮತ್ತು ವಿಎಂಆರ್ ಮಾರ್ಚ್ 22 ರಿಂದ ಏಪ್ರಿಲ್ 4ರ ತನಕ 960 ಪ್ರದೇಶಗಳಲ್ಲಿ 14,301 ಜನರಿಂದ ಅಭಿಪ್ರಾಯವನ್ನು ಸಂಗ್ರಹಣೆ ಮಾಡಲಾಗಿದ್ದು,ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿಗೆ 16 ಮತ್ತು ಕಾಂಗ್ರೆಸ್ ಮೈತ್ರಿಕೂಟ 12 ಸ್ಥಾನಗಳಲ್ಲಿ ಜಯಗಳಿಸಲಿದೆ. ಇತರ ಯಾವುದೇ ಪಕ್ಷದ ಅಭ್ಯರ್ಥಿಗಳು ಜಯಗಳಿಸುವುದಿಲ್ಲ ಎಂದು ವರದಿ ಹೇಳಿದೆ.
ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 27 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ಘೋಷಣೆ ಮಾಡಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು 21ರಲ್ಲಿ ಕಾಂಗ್ರೆಸ್, 7 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ...