ಬೆಂಗಳೂರು, ಆ 13 (DaijiworldNews/HR): ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ನಟ ಉಪೇಂದ್ರ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಅವರು ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಉಪೇಂದ್ರ ಅವರ ಮೇಲೆ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಯುತ್ತಿದೆ
ಇನ್ನು ಲೈವ್ ವಿಡಿಯೋನಲ್ಲಿ ಮಾತನಾಡಿದ್ದ ನಟ ಉಪೇಂದ್ರ ಯಾವುದೋ ಮಾತಿಗೆ ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ ಎಂದು ಹೊಲೆಗೇರಿಯನ್ನು ತುಚ್ಛವಾಗಿ ಕಾಣುವ ಗಾದೆಯೊಂದನ್ನು ಹೇಳಿದ್ದು, ಈ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.