ಶಿಮ್ಲಾ, ಆ 14 (DaijiworldNews/HR): ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಭಾರೀ ಮಳೆಯಿಂದಾಗಿ ಶಿವ ದೇವಾಲಯ ಕುಸಿದು ಒಂಬತ್ತು ಮಂದಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಭೂಕುಸಿತ ಸಂಭವಿಸಿ ಸಮ್ಮರ್ ಹಿಲ್ ಪ್ರದೇಶದಲ್ಲಿರುವ ಶಿವ ದೇವಸ್ಥಾನದಲ್ಲಿ ಹದಿನೈದಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇನ್ನು ಸೋಮವಾರವಾದ ಹಿನ್ನೆಲೆಯಲ್ಲಿ ಶಿವನ ದೇವಸ್ಥಾನದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಇದ್ದರು ಎನ್ನಲಾಗಿದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ತಂಡದಿಂದ ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯ ನಡೆಯುತ್ತಿದೆ.