ಬೆಂಗಳೂರು,ಆ 14 (DaijiworldNews/AK): ರಿಯಲ್ ಸ್ಟಾರ್ ಉಪೇಂದ್ರ ಅವರ ಹೇಳಿಕೆ ಕುರಿತು ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೇ ಸೋಮವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿ 'ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ'.'ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ' ಎಂದು ಬರೆದಿದ್ದಾರೆ.
ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ. ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ. ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹೃದಯಗಳು ಹಿಡಿದ ಪ್ರೀತಿಯ ಕೊಡೆ. ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಸಹ್ರದಯ ನನಗೆ ಕೊಡೆ ತಾಯಿ… ನನಗೆ ಕೊಡೆ. ಧನ್ಯವಾದಗಳು” ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.