ಬೆಂಗಳೂರು, ಆ 15 (DaijiworldNews/HR): ಆಗಸ್ಟ್ 27 ರಂದು ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 2000 ರೂ.ಗಳನ್ನು ವರ್ಗಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಬಡತನ ನಿವಾರಣೆಗೆ ನೇರ ನಗದು ನೀಡುವ ಕಾರ್ಯಕ್ರಮಗಳು ಅತ್ಯುತ್ತಮ ಪರಿಹಾರ ನೀಡಬಹುದು. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಮಹಿಳೆಯರಿಗಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುತ್ತಿದೆ ಎಂದರು.
ಇನ್ನು ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಆಗಸ್ಟ್ 27 ರಂದು ಮಹಿಳೆಯರ ಖಾತೆಗೆ ಮಾಸಿಕ 2000 ರೂ.ಗಳನ್ನು ವರ್ಗಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೆ 1.08 ಕೋಟಿ ಕುಟುಂಬಗಳ ಯಜಮಾನಿಯರು ನೋಂದಾಯಿಸಿಕೊಂಡಿದ್ದಾರೆʼ ಎಂದು ತಿಳಿಸಿದ್ದಾರೆ.