ನವದೆಹಲಿ,ಆ 15 (DaijiworldNews/AK): ನಗರ ಪ್ರದೇಶಗಳಲ್ಲಿ ಸ್ವಂತ ಮನೆ ನಿರ್ಮಿಸಲು ಬಯಸುವವರಿಗೆ ಬ್ಯಾಂಕ್ ಸಾಲದಲ್ಲಿ ನಿರಾಳತೆಯನ್ನುಂಟು ಮಾಡುವ ಹೊಸ ಯೋಜನೆಯನ್ನು ಶೀಘ್ರವೇ ಸರ್ಕಾರ ಜಾರಿಗೆ ತರಲಿದೆ ಎಂದು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
77ನೇ ಸ್ವಾತಂತ್ರ್ಯ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದ ಅವರು ನಗರ ಪ್ರದೇಶಗಳಲ್ಲಿದ್ದರೂ ಸ್ವಂತ ಮನೆ ಇಲ್ಲದ ಮಧ್ಯಮ ವರ್ಗದ ಕುಟುಂಬಗಳಿಗಾಗಿ ನಮ್ಮ ಸರ್ಕಾರವು ಶೀಘ್ರವೇ ಹೊಸ ಯೋಜನೆಯನ್ನು ಜಾರಿ ಮಾಡಲಿದೆ ಎಂದು ಹೇಳಿದ್ದಾರೆ.
ಜೂನ್ 25, 2015ರಲ್ಲಿ ಪ್ರಧಾನಿ ಮೋದಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತಂದಿದ್ದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ)ವನ್ನು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಅನುಷ್ಠಾನಗೊಳಿಸುತ್ತಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಈ ವರ್ಷದ ಜುಲೈ 31ರವರೆ 1.8 ಕೋಟಿ ಮನೆಗಳನ್ನು ಮಂಜೂರು ಮಾಡಲಾಗಿದೆ. ಅದರಲ್ಲಿ 76.02 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಸಚಿವಾಲಯದ ವರದಿ ಹೇಳುತ್ತದೆ.