ಬೆಂಗಳೂರು, ಆ 16 (DaijiworldNews/AK): 17 ಜನರಲ್ಲಿ ಯಾರು ಕಾಂಗ್ರೆಸ್ ಗೆ ಹೋಗ್ತಾರೆ ಅಂತ ನನಗೆ ಗೊತ್ತಿಲ್ಲ ನಾನಂತೂ ಬಿಜೆಪಿ ಬಿಟ್ಟು ಹೋಗಲ್ಲ. ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆಯೇ ಹೊರತು ಕಾಂಗ್ರೆಸ್ಗೆ ಹೋಗಲ್ಲ.ನಾನು ಜೈಲಿಗೆ ಬೇಕಾದರೆ ಹೋಗುತ್ತೇನೆ ಹೊರತು ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ಗೆ ಹೋಗಲ್ಲ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ.
ವೈಯಾಲಿಕಾವಲ್ನ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಜೈಲಿಗೆ ಬೇಕಾದರೆ ಹೋಗುತ್ತೇನೆ ಹೊರತು ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ಗೆ ಹೋಗಲ್ಲ. ನನಗೆ ಕಾಂಗ್ರೆಸ್ ಅಗತ್ಯ ಇಲ್ಲ ಎಂದು ಸ್ಪಷ್ಟಪಡಿಸಿದರು.
ನನ್ನ ಕ್ಷೇತ್ರದ ಅಭಿವೃದ್ಧಿ ಮಾಡಿಕೊಟ್ಟರೆ ಸಾಕು. ಬೇಕಿದ್ದರೆ ರಾಜೀನಾಮೆ ಕೊಡು, ಕ್ಷೇತ್ರದ ಅಭಿವೃದ್ಧಿ ಮಾಡಿಕೊಡ್ತೇವೆ ಎಂದರೆ ರಾಜೀನಾಮೆ ಕೊಡುತ್ತೇನೆ. ಆದರೆ ಕಾಂಗ್ರೆಸ್ಗೆ ಮಾತ್ರ ಸೇರಲ್ಲ ಎಂದು ಹೇಳಿದರು.
ಮುನಿರತ್ನ ಭೇಟಿ ಮಾಡಿದ್ರು ಎಂಬ ಡಿಕೆಶಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಅವರು, ಡಿಕೆಶಿ ಮನೆಗೆ ಯಾರು ಹೋಗಿದ್ದರು, ಕಳ್ಳತನದಿಂದ ಯಾರಾದ್ರೂ ಹೋಗಿದ್ರಾ , ಬುರ್ಕಾ ಹಾಕಿಕೊಂಡು ಹೋಗಿದ್ರಾ? ಇದನ್ನ ಹೇಳಲಿ. ಕ್ಷೇತ್ರದ ವಿಚಾರ ಬಗ್ಗೆ ಮಾತಾಡಿದ್ದನ್ನು ರಾಜಕೀಯವಾಗಿ ಡಿಕೆಶಿ ಬಳಸಿಕೊಳ್ಳೋದು ಬೇಡ ಎಂದು ತಿಳಿಸಿದರು.
ವೈಯಕ್ತಿಕವಾಗಿ ಡಿ.ಕೆ. ಸುರೇಶ್, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಜೊತೆ ಯಾವುದೇ ದ್ವೇಷ ಇಲ್ಲ. ಅಧಿಕಾರಕ್ಕೋಸ್ಕರ ನಾನು ಪಕ್ಷ ಬಿಟ್ಟು ಹೋಗಲ್ಲ. ನಾನು ವಿಪಕ್ಷದಲ್ಲಿಯೇ ಇರುತ್ತೇನೆ ಎಂದು ಹೇಳಿದರು.