ಜಮ್ಮು ಮತ್ತು ಕಾಶ್ಮೀರ, ಆ 17 (DaijiworldNews/HR): ಇಸ್ಲಾಂಗಿಂತ ಹಿಂದೂ ಧರ್ಮ ಹಳೆಯದು, ಮೊದಲು ಮುಸ್ಲಿಮರೂ ಹಿಂದೂಗಳಾಗಿದ್ದರು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, 1500 ವರ್ಷಗಳ ಹಿಂದೆ ಇಸ್ಲಾಂ ಹುಟ್ಟಿದ್ದು, ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ಭಾರತದ ಮುಸ್ಲಿಮರು ಮೂಲತಃ ಹಿಂದೂಗಳು, ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರು ಎಂದರು.
ಇನ್ನು 600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ಮಾತ್ರ ಇದ್ದರು ಎಂದು ಹೇಳುತ್ತಾರೆ, ನಂತರ ಜನರು ಮತಾಂತರಗೊಂಡು ಮುಸ್ಲಿಮರಾದರು. ಜನರು ಸಹೋದರತೆ, ಶಾಂತಿ, ಐಕ್ಯತೆಯನ್ನು ಕಾಪಾಡುವಂತೆ ಮನವಿ ಮಾಡಿದ ಆಜಾದ್, ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಬಾರದು, ಜನರು ಧರ್ಮದ ಹೆಸರಿನಲ್ಲಿ ಮತ ಹಾಕಬಾರದು ಎಂದಿದ್ದಾರೆ.