ಭೋಪಾಲ್, ಆ 18(DaijiworldNews/Ak):ಸಾಕು ನಾಯಿಗಳಿಂದ ಎರಡು ಮನೆ ಮಾಲೀಕರ ನಡುವೆ ನಡೆದ ಕಾದಾಟ ಇಬ್ಬರನ್ನು ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.
ಇಬ್ಬರನ್ನು ಗುಂಡಿಕ್ಕಿ ಕೊಂದ ಆರೋಪಿ ರಾಜ್ಪಾಲ್ ಸಿಂಗ್ ರಾಜಾವತ್ ಎಂದು ಗುರುತಿಸಲಾಗಿದ್ದು, ಬ್ಯಾಂಕ್ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ . ಈತ ಗುರುವಾರ ತನ್ನ ಮನೆಯ ಬಾಲ್ಕನಿಯಿಂದ ಗುಂಡು ಹಾರಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 6 ಮಂದಿ ಗಾಯಗೊಂಡಿದ್ದಾರೆ.
ರಾಜಾವತ್ ಮತ್ತು ಅವರ ನೆರೆಹೊರೆಯವರಾದ ವಿಮಲ್ ಅಚಲ (35) ರಾತ್ರಿ 11 ಗಂಟೆಗೆ ಕೃಷ್ಣಾ ಬಾಗ್ ಕಾಲೋನಿಯ ಕಿರಿದಾದ ಲೇನ್ನಲ್ಲಿ ತಮ್ಮ ನಾಯಿಗಳನ್ನು ಹಿಡಿದುಕೊಂಡು ಹೋಗುತ್ತಿದ್ದಾಗ ಎರಡೂ ಶ್ವಾನಗಳು ಕಾದಾಡಿದವು. . ಈ ಹಿನ್ನಲೆ ಶ್ವಾನಗಳ ಮಾಲೀಕರ ನಡುವೆಯೂ ವಾಗ್ವಾದ ನಡೆಯಿತು. ಇದೇ ಸಿಟ್ಟಿನಿಂದ ಬಂದ ರಾಜಾವತ್, ತನ್ನ 12-ಬೋರ್ ರೈಫಲ್ನೊಂದಿಗೆ ಮನೆಯ ಬಾಲ್ಕನಿಯ ಮೇಲೇರಿ ಅಚಲಾ ಹಾಗೂ ಮತ್ತೊಬ್ಬ ನೆರೆಯವನಾದ 27 ವರ್ಷದ ರಾಹುಲ್ ವರ್ಮಾ ಮೇಲೆ ಗುಂಡು ಹಾರಿಸಿದ್ದಾನೆ. ತಕ್ಷಣವೇ ಇಬ್ಬರನ್ನೂ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತ ಅಚಲಾ ನಗರದ ನಿಪಾನಿಯಾ ಪ್ರದೇಶದಲ್ಲಿ ಹೇರ್ ಸಲೂನ್ ನಡೆಸುತ್ತಿದ್ದ.
ಇನ್ನು ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ರಾಜಾವತ್, ಅವರ ಪುತ್ರ ಸುಧೀರ್ ಮತ್ತು ಇನ್ನೊಬ್ಬ ಸಂಬಂಧಿ ಶುಭಂ ಅವರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.
ರಾಜಾವತ್ ಅವರು ಪರವಾನಗಿ ಪಡೆದ 12-ಬೋರ್ ರೈಫಲ್ ಅನ್ನು ಹೊಂದಿದ್ದರಿಂದ ಇಂದೋರ್ನಲ್ಲಿ ಖಾಸಗಿ ಸಂಸ್ಥೆಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ನೇಮಕಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.