ಬೆಂಗಳೂರು,ಆ 18 (DaijiworldNews/AK): ನಗರದಲ್ಲಿ ಅಮೆರಿಕಾ ದೂತಾವಾಸ ಕಚೇರಿ ಪ್ರಾರಂಭಿಸುವ ತೀರ್ಮಾನವನ್ನು ಸ್ವಾಗತಿಸಿದ ಮುಖ್ಯಮಂತ್ರಿಯವರು, ಇದಕ್ಕೆ ಎಲ್ಲ ಅಗತ್ಯ ಬೆಂಬಲ, ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಚೆನ್ನೈನಲ್ಲಿನ ಅಮೇರಿಕ ದೂತಾವಾಸದ ಕಾನ್ಸಲ್ ಜನರಲ್ ಕ್ರಿಸ್ಟೊಫರ್ ಡಬ್ಲ್ಯು ಹಾಡ್ಜಸ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕ್ರಿಸ್ಟೊಫರ್ ಹಾಡ್ಜಸ್ ಅವರು, ಬೆಂಗಳೂರು ಪ್ರವಾಸ ಹಾಗೂ ಭಾರತ - ಅಮೆರಿಕಾ ಭಾಗೀದಾರಿಕೆಯ ಬಗ್ಗೆ ಇಲ್ಲಿರುವ ಉತ್ಸಾಹ, ಆಶಾವಾದ ಹೊಸ ಚೈತನ್ಯ ಮೂಡಿಸಿದೆ. ಇಲ್ಲಿರುವ ಸುಮಾರು 650 ಅಮೇರಿಕನ್ ಕಂಪನಿಗಳು ಮತ್ತು 30 ವರ್ಷಗಳಿಂದ ಅಮೇರಿಕದ ಕಚೇರಿ ಇಲ್ಲಿ ಕೆಲಸ ಮಾಡುತ್ತಿರುವುದು ನಮ್ಮ ಬದ್ಧತೆಗೆ ಸಾಕ್ಷಿ. ನಮ್ಮ ಸಹಭಾಗಿತ್ವವನ್ನು ಇನ್ನಷ್ಟು ಮುಂದೆ ಹೇಗೆ ಕೊಂಡೊಯ್ಯಬಹುದು ಎಂಬುದರ ಬಗ್ಗೆ ಚರ್ಚೆ ನಡೆಸಿದ್ದು ಖುಷಿ ತಂದಿದೆ” ಎಂದರು.