ಮಂಡ್ಯ, ಆ 19 (DaijiworldNews/HR): ಬಿಜೆಪಿ ನಿರ್ಧಾರಗಳಿಗೂ ನನಗೂ ಸಂಬಂಧವಿಲ್ಲ. ಆದರೆ ಬಿಜೆಪಿಗೆ ನೀಡಿರುವ ಬೆಂಬಲ ಮುಂದುವರಿಯಲಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ನಾಯಕರು ಮಾಡಿರುವ ಆರೋಪಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ. ಯಾರು ಆರೋಪ ಮಾಡಿದ್ದಾರೆಯೋ ಅವರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಹೀಗಿರುವಾಗ ಆ ವಿಚಾರವಾಗಿ ಪ್ರತಿಕ್ರಿಯಿಸುವುದಿಲ್ಲ ಎಂದರು.
ಇನ್ನು ನಾನು ಬಿಜೆಪಿ ಸಂಸದೆ ಅಲ್ಲ, ಸ್ವತಂತ್ರ ಅಭ್ಯರ್ಥಿಯಾಗಿ ಸಂಸದೆಯಾಗಿ ಆಯ್ಕೆಯಾದವಳು. ಬಿಜೆಪಿಗೆ ಬೆಂಬಲ ನೀಡಿರುವುದು. ನೀಡುತ್ತಿರುವುದು ನಿಜ. ಹಾಗೆಂದು ಅವರು ಕೈಗೊಂಡ ನಿರ್ಧಾರಗಳಿಗೂ ನನಗೂ ಸಂಬಂಧ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.