ದಾವಣಗೆರೆ,ಆ 19 (DaijiworldNews/AK):ಅಮೆರಿಕಾದಲ್ಲಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ಪತಿ, ಪತ್ನಿ ಹಾಗೂ ಗಂಡು ಮಗು ಮೃತಪಟ್ಟ ಘಟನೆ ನಡೆದಿದೆ. ಈ ಘಟನೆ ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ ನಲ್ಲಿ ನಡೆದಿದೆ.
ಮೃತಪಟ್ಟವರು ಯೋಗೇಶ್ ಹೊನ್ನಾಳ(37), ಪ್ರತಿಭಾ ಹೊನ್ನಾಳ್(35) ಹಾಗೂ ಯಶ್ ಹೊನ್ನಾಳ್(6) ಎಂದು ಗುರುತಿಸಲಾಗಿದೆ.
ಕಳೆದ 9 ವರ್ಷಗಳ ಹಿಂದೆ ದಂಪತಿ ಮದುವೆಯಾಗಿದ್ದು, ಬಳಿಕ ಅಮೆರಿಕಾದಲ್ಲಿ ವಾಸವಾಗಿದ್ದರು. ಮೃತ ಪತಿ ಹಾಗೂ ಪತ್ನಿ ಇಬ್ಬರೂ ವೃತ್ತಿಯಲ್ಲಿ ಎಂಜಿನಿಯರ್ ಆಗಿ ಸೇವೆಸಲ್ಲಿಸುತ್ತಿದ್ದರು. ಆದರೆ ಈ ಮೂವರ ಸಾವು ನಿಗೂಢವಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ.
ಇದೀಗ ಮೂವರ ಸಾವಿನ ನಿಖರ ಕಾರಣ ತಿಳಿಸುವಂತೆ ಹಾಗೂ ಮೃತದೇಹಗಳನ್ನು ಸ್ವದೇಶಕ್ಕೆ ತರಿಸಿಕೊಡುವಂತೆ ಮೃತರ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.