ಬೆಂಗಳೂರು, ಆ 19 (DaijiworldNews/AK):‘ಘರ್ ವಾಪ್ಸಿ’ ಹೆಸರಿನಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡುವ ಕಾರ್ಯಕ್ಕೆ ನಾವು ಕೈಹಾಕಿದರೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವೂ ಅರ್ಧದಷ್ಟು ಖಾಲಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತು ಯಾರಿಗೂ ಷರತ್ತು ಹಾಕಿಲ್ಲ. ಪಕ್ಷದ ತತ್ವ-ಸಿದ್ಧಾಂತ ಒಪ್ಪಿದರೆ ಯಾರಿಗಾದರೂ ಸ್ವಾಗತ ಮಾಡುತ್ತೇವೆ ಎಂದರು.
ಕೆಲವರು ನನ್ನ ಜೊತೆಗೆ ಸಂಪರ್ಕದಲ್ಲಿದ್ದಾರೆ. ಸದ್ಯ ಬಿಜೆಪಿ, ಜೆಡಿಎಸ್ ಅವರ ಅಸ್ತಿತ್ವ ಕಾಪಾಡಿಕೊಳ್ಳಲಿ ಎಂದು ತಿಳಿಸಿದರು.