ಬೆಂಗಳೂರು, ಆ 20(DaijiworldNews/MS) : ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಕದ ತಟ್ಟಿ ಕೊನೆಗೆ ಜೆಡಿಎಸ್ ಸೇರಿದ್ದ ಮಾಜಿ ಸಂಸದ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರುವುದು ಬಹುತೇಕ ಪಕ್ಕಾ ಆಗಿದೆ.
ಆಯನೂರು ಕಾಂಗ್ರೆಸ್ನಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಇಂದು ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಇದರೊಂದಿಗೆ ಶೀಘ್ರದಲ್ಲೇ ಜೆಡಿಎಸ್ ಮಹತ್ವದ ವಿಕೆಟ್ ಪತನಗೊಳ್ಳಲಿದೆ. ಜತೆಗೆ ಅವರು ಬಿಜೆಪಿ ಕೆಲವು ನಾಯಕರನ್ನು ಕಾಂಗ್ರೆಸ್ಗೆ ಸೆಳೆಯುವ ಸಾಧ್ಯತೆಯಿದೆ.