ಬೆಂಗಳೂರು, ಆ 21(DaijiworldNews/MS): ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಆಹಾರ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಬರೋಬ್ಬರಿ 4.59ಲಕ್ಷ ಕಾರ್ಡ್ ರದ್ದುಗೊಳಿಸಿದೆ. ಆ ಮೂಲಕ ಬಿಪಿಎಲ್ ಕಾರ್ಡ್ ಹೊಂದಿ ಸರ್ಕಾರಿ ಯೋಜನೆ ಪಡೆಯಲು ಹೊರಟಿದ್ದ ನಾಗರಿಕರ ಮೇಲೆ ಆಹಾರ ಇಲಾಖೆ ಹದ್ದಿನ ಕಣ್ಣಿಟ್ಟಿದೆ.
ಬಿಪಿಎಲ್ ಗೆ ಅರ್ಹರಲ್ಲದ ಫಲಾನುಭವಿಗಳು ಉಚಿತ ಆಹಾರ ಧಾನ್ಯ ಪಡೆಯುತ್ತಿದ್ದಾರೆ ಎಂಬ ದೂರುಗಳಿವೆ. ಈ ನಿಟ್ಟಿನಲ್ಲಿ ಸೂಕ್ತ ಕಾರ್ಯಾಚರಣೆ ಮೂಲಕ ಮೃತರ ಹೆಸರಿನಲ್ಲಿರುವ 4.59 ಲಕ್ಷ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗಿದೆ.
ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಮೂಲಕ ಅಕ್ರಮ ಕಾರ್ಡ್ ಹೊಂದುವವರ ವಿರುದ್ಧ ಮತ್ತಷ್ಟು ಬಿಗಿಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್ ಕಾರ್ಡ್ದಾರರಿದ್ದು, 4.36 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಿದೆ.