ಬೆಂಗಳೂರು,ಆ 21(DaijiworldNews/AK): ದಾವಣಗೆರೆ ಮೂಲದ ದಂಪತಿ ಹಾಗೂ ಮಗು ಅಮೆರಿಕದಲ್ಲಿ ನಿಗೂಢವಾಗಿ ಸಾವು ಕಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಡುವಂತೆ ಕುಟುಂಬದವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ಬಳಿಕ ಮೂವರ ಮೃತದೇಹಗಳನ್ನು ಭಾರತಕ್ಕೆ ತರಿಸುವುದು ಸೇರಿದಂತೆ ಹಲವು ತಾಂತ್ರಿಕ ನೆರವು ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಸಿಎಂ ಅಗತ್ಯ ನೆರವು ಒದಗಿಸುವಂತೆ ಮುಖ್ಯಮಂತ್ರಿಗಳು ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಸೂಚಿಸಿದರು.