ಬೆಂಗಳೂರು, ಆ 21(DaijiworldNews/MS): ಎಸ್ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್, ಆಯನೂರು ಮಂಜುನಾಥ್ ಸೇರಿದಂತೆ ಪ್ರಮುಖ ಅನ್ಯ ಪಕ್ಷದ ನಾಯಕರು ಕಾಂಗ್ರೆಸ್ ಸೇರುವುದಕ್ಕೆ ತೆರೆಮರೆಯ ಪ್ರಯತ್ನ ನಡೆಯುತ್ತಿರಬೇಕಾದರೆ, ಇದೀಗ ಮತ್ತೊಬ್ಬ ಪ್ರಭಾವಿ ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯನಾಯ್ಡು ಕೆಪಿಸಿಸಿ ರಾಜ್ಯಾಧ್ಯಕ್ಷ , ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆವರನ್ನು ಭೇಟಿ ಆಗಿರುವುದು ರಾಜ್ಯಾ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಅನಿರೀಕ್ಷಿತ ಬೆಳವಣಿಗೆಯಲ್ಲಿ ಮಾಜಿ ಸಚಿವರೂ ಆದ ಕಟ್ಟಾ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಕಾಂಗ್ರೆಸ್ ಆರಂಭಿಸಿರುವ ಆಪರೇಷನ್ ಹಸ್ತ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಮಧ್ಯೆಯೇ ಮಾಜಿ ಸಚಿವ, ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಭೇಟಿ ಭಾರೀ ಕುತೂಹಲಕ್ಕೆ ಮೂಡಿಸಿದೆ