ಮಂಡ್ಯ, ಆ 22 (DaijiworldNews/MS): ಕೆಆರ್ಎಸ್ ಡ್ಯಾಂನಿಂದ ತಮಿಳುನಾಡು ರಾಜ್ಯಕ್ಕೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿ ಇಂದು ರೈತ ಸಂಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಬಂದ್ ಮಾಡಲಿದ್ದಾರೆ.
ರೈತ ಸಂಘದ ಮೂಲ ಸಂಘಟನೆಯಿಂದ ದಶಪಥ ಹೆದ್ದಾರಿ ತಡೆಗೆ ಕರೆ ನೀಡಲಾಗಿದ್ದು, ಬೆಳಗ್ಗೆ 11 ಗಂಟೆಗೆ ಮಂಡ್ಯದ ಇಂಡುವಾಳು ಮೂಲಕ ಟ್ರ್ಯಾಕ್ಟರ್, ಎತ್ತಿನಗಾಡಿ ಮತ್ತು ಜಾನುವಾರುಗಳ ಜತೆ ರೈತರು ಹೆದ್ದಾರಿಗೆ ಇಳಿಯಲಿದ್ದು, ವಾಹನ ಸಂಚಾರ ತಡೆದು ಪ್ರತಿಭಟನೆ ಮಾಡಲಿದ್ದಾರೆ. ಅನ್ನದಾತರ ಹೋರಾಟಕ್ಕೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದು, 500ಕ್ಕೂ ಅಧಿಕ ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.
ಇದರಿಂದ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ. ರೈತರ ಹಿತ ಕಾಪಾಡಲು ಸರ್ಕಾರ ಮತ್ತು ಜನಪ್ರತಿನಿಧಿಗಳು ವಿಫಲರಾಗಿದ್ದು ತಕ್ಷಣವೇ ತಮಿಳುನಾಡಿಗೆ ಬಿಡುತ್ತಿರುವ ನೀರು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ