ಬೆಂಗಳೂರು, ಆ 22 (DaijiworldNews/HR): ಇಂದು ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯದ 14 ಕಡೆ ಮತ್ತೆ ಲೋಕಾಯುಕ್ತ ದಾಳಿಯಾಗಿದೆ.
ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಕೇಳಿಬಂದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಆಗಸ್ಟ್ 17ರಂದು ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ 48 ಕಡೆಗಳಲ್ಲಿ ದಾಳಿ ಮಾಡಿ ಭ್ರಷ್ಟ ಅಧಿಕಾರಿಗಳಿಂದ ಕೋಟಿ-ಕೋಟಿ ಹಣ ಹಾಗೂ ಆಸ್ತಿ ಪಾಸ್ತಿ ಪತ್ತೆ ಮಾಡಿದ್ದು, ಇದೀಗ ಮತ್ತೆ ಭ್ರಷ್ಟ ಅಧಿಕಾರಿಗಳ ಬೇಟೆ ಮುಂದುವರೆಸಿದ್ದು, ಒಂದು ವಾರದಲ್ಲಿ ಇದು ಎರಡನೇ ದಾಳಿಯಾಗಿದೆ.