ಬೆಂಗಳೂರು, ಆ 22 (DaijiworldNews/HR): 20-30 ಜನ ಶಾಸಕರು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಲು ಸಿದ್ಧರಾಗಿದ್ದು, ಇದನ್ನ ಕಂಟ್ರೋಲ್ ಮಾಡಲು ಕಾಂಗ್ರೆಸ್ ಅವರು ಘರ್ ವಾಪಸಿ ಅಂತ ಶುರು ಮಾಡಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನನ್ನ ತಿಳುವಳಿಕೆಯಲ್ಲಿ ನಮ್ಮ ಪಕ್ಷದ ಯಾವುದೇ ಶಾಸಕರು ಪಕ್ಷ ಬಿಟ್ಟು ಹೋಗುವುದಿಲ್ಲ. ಕಾಂಗ್ರೆಸ್ ಈ ವಿಷಯವನ್ನ ಬಿಟ್ಟಿದ್ದಾರೆ. ಕಾಂಗ್ರೆಸ್ನಲ್ಲೆ 20-30 ಜನ ಶಾಸಕರು ಪಕ್ಷ ಬಿಡುವ ಸ್ಥಿತಿಯಲ್ಲಿ ಇದ್ದಾರೆ ಎಂದರು.
ಇನ್ನು 30 ಜನ ಶಾಸಕರು ಪಕ್ಷ ಬಿಟ್ಟು ಹೋಗೋದನ್ನ ಮುಚ್ಚಿಕೊಳ್ಳೋದಕ್ಕಾಗಿ ಬಿಜೆಪಿ, ಜೆಡಿಎಸ್ ನಿಂದ 20 ಜನ, 10 ಜನ ಸಂಪರ್ಕದಲ್ಲಿ ಇದ್ದಾರೆ ಅಂತ ಹೇಳ್ತಿದ್ದಾರೆ. ಕಾಂಗ್ರೆಸ್ ನಿಂದ ಹೊರಗೆ ಬರೋಕೆ ರೆಡಿ ಇರೋ ಶಾಸಕರನ್ನ ಕಂಟ್ರೋಲ್ ಮಾಡೋಕೆ ಘರ್ ವಾಪಸಿ ಅಂತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.