ಬೆಂಗಳೂರು, ಆ 24 (DaijiworldNews/MS): ಮಾಜಿ ಸಂಸದ ಆಯನೂರು ಮಂಜುನಾಥ್ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಲಿದ್ದಾರೆ. ಇದರೊಂದಿಗೆ ಲೋಕಸಭೆ ಚುನಾವಣೆ ಹಿನ್ನೆಲೆ ಬೇರೆ ಬೇರೆ ಪಕ್ಷಗಳಿಂದ ಕಾಂಗ್ರೆಸ್ ಸೇರ್ಪಡೆ ಪರ್ವ ಶುರುವಾಗಿದೆ.
ಶಿವಮೊಗ್ಗದಲ್ಲಿಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಗುರುವಾರ ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಾನು ಮತ್ತು ಬಳಗ ಪಕ್ಷ ಸೇರ್ಪಡೆಯಾಗಲಿದ್ದೇವೆ.ವಿಧಾನಸಭೆ ಚುನಾವಣೆ ಹೊತ್ತಿನಲ್ಲೇ ಕಾಂಗ್ರೆಸ್ ಸೇರ್ಪಡೆಯ ಸಂದರ್ಭ ಎದುರಾಗಿತ್ತು. ಆಗ ಕಾರಣಾಂತರದಿಂದ ಜೆಡಿಎಸ್ ಸೇರಬೇಕಾಯಿತು. ಗುರುವಾರ ಬೆಳಗ್ಗೆ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಸೇರುತ್ತಿದ್ದೇನೆ. ಆದರೆ ಅನಿವಾರ್ಯವಾಗಿ ಜೆಡಿಎಸ್ ಸೇರಿದ್ದೆ. ಕಾಂಗ್ರೆಸ್ ಸೇರ್ಪಡೆಗೆ ನಾಲ್ಕು ಜನ ವಿರೋಧಿಸಿದ್ದರೆ ಉಳಿದ ಶೇ.೯೯ ಜನರು ನನ್ನನ್ನು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಷರತ್ತು ರಹಿತವಾಗಿ ಸೇರಿದ್ದೇನೆ. ವಿಧಾನ ಪರಿಷತ್ ಚುನಾವಣೆಗೆ ಯಾರಿಗೆ ಟಿಕೆಟ್ ಕೊಟ್ಟರೂ ಗೆಲುವು ಮುಖ್ಯ. ಜೆಡಿಎಸ್ ಪಕ್ಷ ತೊರೆಯಲು ಯಾವುದೇ ಕಾರಣವಿಲ್ಲ ಎಂದು ಇದೇ ವೇಳೇ ಹೇಳಿದ್ದಾರೆ.