ಬೆಂಗಳೂರು, ಆ 24 (DaijiworldNews/HR): ನಾನು ಲೋಕಸಭೆಗೂ ಹೋಗಲ್ಲ, ನನ್ನ ಮಗನೂ 100% ರಾಜಕೀಯಕ್ಕೆ ಬರುವುದಿಲ್ಲ ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಗೆ ಹೋಗುವ ಬಗ್ಗೆ ಇಲ್ಲಿಯವರೆಗೆ ಕರೆ ಬಂದಿಲ್ಲ, ನಾನು ಕಾಯುತ್ತಿದ್ದೇನೆ. ಮೆಸೇಜ್ ಬಂದರೆ ನಾಳೆ ಹೋಗುತ್ತೇನೆ ಎಂದರು.
ಇನ್ನು ನಾನು ಅಮಿತ್ ಶಾ ಜೊತೆ ಚೆನ್ನಾಗಿದ್ದೇನೆ ಅಂತ ಟಾರ್ಗೆಟ್ ಏನೂ ಇಲ್ಲ. ಅವರು ಸಹಕಾರ ಮಂತ್ರಿ, ನಾನು ಸಹಕಾರ ಮಂತ್ರಿ ಆಗಿದ್ದೆ ಅಷ್ಟೇ ಎಂದಿದ್ದಾರೆ.