ಮಂಡ್ಯ, ಆ 25 (DaijiworldNews/AK): ಪೋಷಕರಿಗೆ ಸರಿಯಾಗಿ ತರಗತಿಗೆ ಹಾಜರಾಗುತ್ತಿಲ್ಲ ಎಂದು ಮಾಹಿತಿ ನೀಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಲಾಂಗ್ ಹಿಡಿದು ಉಪನ್ಯಾಸಕರನ್ನೇ ಬೆದರಿಸಿದ ಪ್ರಕರಣ ನಾಗಮಂಗಲದಲ್ಲಿ ಬೆಳಕಿಗೆ ಬಂದಿದೆ.
ನಗರದ ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ತರಗತಿಗೆ ಸರಿಯಾಗಿ ಹಾಜರಾಗುತ್ತಿರಲಿಲ್ಲ ಎಂದು ಉಪನ್ಯಾಸಕರೊಬ್ಬರು ತಿಳುವಳಿಕೆ ಹೇಳುವಂತೆ ಪೋಷಕರಿಗೆ ಮಾಹಿತಿ ನೀಡಿದ್ದಾರೆ
ಇದರಿಂದ ಸಿಟ್ಟಾದ ವಿದ್ಯಾರ್ಥಿ ಲಾಂಗ್ ತೋರಿಸಿ ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಹಾಕುತ್ತಿರುವ ವೀಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿದ್ಯಾರ್ಥಿಯಿಂದ ಬೈಕ್ ಹಾಗೂ ಲಾಂಗ್ನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಮತ್ತೊಮ್ಮೆ ಈ ರೀತಿ ಮಾಡದಂತೆ ತಿಳುವಳಿಕೆ ಹೇಳಿ ಕಳಿಸಿದ್ದಾರೆ.