ಅಹಮದಾಬಾದ್, ಆ 27 (DaijiworldNews/AK): ಮಧ್ಯಪ್ರದೇಶದ ರತ್ಲಾಮ್ ಮೂಲದ 9 ತಿಂಗಳ ಮಗುವೊಂದು ಆಕಸ್ಮಿಕವಾಗಿ ಸಣ್ಣ ಎಲ್ಇಡಿ ಬಲ್ಬ್ ನುಂಗಿರುವ ಘಟನೆ ಅಹಮದಾಬಾದ್ನಲ್ಲಿ ನಡೆದಿದೆ.
ಮಗುವನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದೆ. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಮಗು ಆಟಿಕೆ ಮೊಬೈಲ್ ಫೋನ್ನೊಂದಿಗೆ ಆಟವಾಡುತ್ತಿತ್ತು, ಅದರಲ್ಲಿರುವ ಆಂಟೆನಾದಲ್ಲಿ ಎಲ್ಇಡಿ ಬಲ್ಬ್ ಇತ್ತು, ಆ ಬಲ್ಬ್ ಅನ್ನು ಬಾಯಿಗೆ ಹಾಕಿಕೊಂಡಿತ್ತು.
ನಂತರ ಮಗುವಿಗೆ ಉಸಿರಾಟದ ತೊಂದರೆ ಉಂಟಾಯಿತು. ಆಗ ಪೋಷಕರು ಮಗುವಿಗೆ ಏನೋ ಆಗಿದೆ ಎಂದು ಭಾವಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಎಕ್ಸ್ ರೇ ಮಾಡಿದ ಬಳಿಕ, ಮಗು ಎಲ್ಇಡಿ ಬಲ್ಬ್ ನುಂಗಿರುವುದು ಗೊತ್ತಾಗಿದೆ. ಎಕ್ಸ್ ರೇ ಯಲ್ಲಿ ಶ್ವಾಸಕೋಶದಲ್ಲಿ ಆ ವಸ್ತು ಪತ್ತೆಯಾಗಿತ್ತು. ತಕ್ಷಣ ಶಸ್ತ್ರ ಚಿಕಿತ್ಸೆ ನಡೆಸಿ ಮಗುವಿನ ಶ್ವಾಸಕೋಶದಿಂದ ಬಲ್ಬ್ ಅನ್ನು ಹೊರ ತೆಗೆಯಲಾಯಿತು.