ನವದೆಹಲಿ, ಆ 27 (DaijiworldNews/HR): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎಎಪಿ ಮಾಜಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು ಜೈಲಿನ ಆವರಣದಲ್ಲಿ ಸ್ವಿಮ್ಮಿಂಗ್ ಪೂಲ್ ಬೇಕೆಂದು ಕೇಳುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಸತ್ಯೇಂದರ್ ಜೈನ್ ಅವರಿಗೆ ಕೋರಲಾದ ಮಧ್ಯಂತರ ವೈದ್ಯಕೀಯ ಜಾಮೀನು ವಿಸ್ತರಣೆಯನ್ನು ಜಾರಿ ನಿರ್ದೇಶನಾಲಯ ಆಕ್ಷೇಪ ವ್ಯಕ್ತಪಡಿಸಿದೆ.
ಇನ್ನು ಜೈನ್ ಅವರ ವೈದ್ಯಕೀಯ ಸಲಹೆಯನ್ನ ಉಲ್ಲೇಖಿಸಿ ಅವರ ಮಧ್ಯಂತರ ಜಾಮೀನು ವಿಸ್ತರಣೆ ಮಾಡುವಂತೆ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಪ್ರೀಂಕೋರ್ಟ್ಗೆ ಮನವಿ ಮಾಡಿದ್ದರು.
ಜೈನ್ ಅವರು ಜೈಲಿನಲ್ಲಿ ಈಜುಕೊಳ ಬೇಕೆಂದು ಕೇಳುತ್ತಿದ್ದಾರೆ. ಎಲ್ಲರಿಗೂ ಇದು ಸಾಧ್ಯವಾಗಲ್ಲ ಎಂದು ಇಡಿ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ತಿಳಿಸಿದ್ದಾರೆ.