ಮೈಸೂರು,ಆ 27 (DaijiworldNews/AK): ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯನವರಿಗೆ ಸಾಂವಿಧಾನಿಕ ಹುದ್ದೆ ನೀಡಲಾಗಿದೆ. ಆಶ್ರಯ ಸಮಿತಿ ಅಧ್ಯಕ್ಷರಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. 15 ದಿನಗಳ ಹಿಂದೆಯೇ ಆದೇಶವಾಗಿದ್ದು, ವರುಣಾ ವಿಧಾನಸಭಾ ಕ್ಷೇತ್ರದ ಜನರ ಸಮಸ್ಯೆಯನ್ನು ಆಲಿಸುತ್ತೇನೆ. ಕಳೆದ 15 ದಿನದ ಹಿಂದೆಯೇ ಆದೇಶ ಆಗಿದೆ. ಆದೇಶ ಪತ್ರವನ್ನ ನಿಮಗೆ ಕಳುಹಿಸಿಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು.
15 ದಿನಗಳ ಹಿಂದೆಯೇ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಆದರೆ ಇದೀಗ ಈ ವಿಚಾರ ಬೆಳಕಿಗೆ ಬಂದಿದೆ. ಸ್ವತಃ ಯತೀಂದ್ರ ಅವರೇ ತಮಗೆ ಸಾಂವಿಧಾನಿಕ ಹುದ್ದೆ ನೀಡಿರುವ ಬಗ್ಗೆ ಮಾಧ್ಯಮಗಳಿಗೆ ಬಹಿರಂಗಪಡಿಸಿದ್ದಾರೆ. ಇದೀಗ ಸಿದ್ದರಾಮಯ್ಯನವರು ತಮ್ಮ ಪುತ್ರನಿಗೆ ಸಾಂವಿಧಾನಿಕ ಹುದ್ದೆಯನ್ನು ಯಾರಿಗೂ ಗೊತ್ತಿಲ್ಲದೇ ನೀಡಿದ್ರ ಎಂಬ ಪ್ರಶ್ನೆ ಹುಟ್ಟುಕೊಂಡಿದೆ.