ನವದೆಹಲಿ, ಆ 28 (DaijiworldNews/MS): ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.
" ಪ್ರತಿಭಾನ್ವಿತ ನೀರಜ್ ಚೋಪ್ರಾ ಶ್ರೇಷ್ಠ ಪ್ರದರ್ಶನ ನೀಡಿದ್ದಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಅವರನ್ನು ಕೇವಲ ಅಥ್ಲೆಟಿಕ್ಸ್ನಲ್ಲಿ ಚಾಂಪಿಯನ್ ಆಗಿರದೆ ಇಡೀ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠತೆಯ ಸಂಕೇತವಾಗಿಸಿದೆ. ವಿಶ್ವದಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು" ಎಂದು ತಿಳಿಸಿದ್ದಾರೆ.
ಹಂಗೇರಿಯ ಬುಡಾಪೆಸ್ಟ್ನಲ್ಲಿ ಭಾನುವಾರ ನಡೆದ ಪುರುಷರ ಜಾವೆಲಿನ್ ಥ್ರೋ ಫೈನಲ್ 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದರು.
ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಕೂಡ ಟ್ವೀಟ್ ಮಾಡಿದ್ದು "ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಸ್ವರ್ನದ ಪದಕ ಗೆದ್ದ ಮೊದಲನೇ ಭಾರತೀಯ ಅಥ್ಲೀಟ್ ಆಗಿ ನೀರಜ್ ಚೋಪ್ರಾ ಹೊರಹೊಮ್ಮಿದ್ದಾರೆ. ನಿಮ್ಮ ಸಾಧನೆಗಳ ಬಗ್ಗೆ ದೇಶವೇ ಹೆಮ್ಮೆಪಡುತ್ತದೆ ಮತ್ತು ಈ ಕ್ಷಣವು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ ಎಂದು ಹೇಳಿದ್ದಾರೆ.