ಮೈಸೂರು,ಆ 28 (DaijiworldNews/AK): ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ಅವರು, ಸಿದ್ದಾಂತ , ಪಕ್ಷದ ಕಾರ್ಯಕ್ರಮಗಳನ್ನು ಒಪ್ಪಿಕೊಂಡು ಬರುವವರಿಗೆ ಪಕ್ಷ ಬಿಟ್ಟು ಹೋದವರಷ್ಟೇ ಅಲ್ಲ, ಯಾರೇ ಬಂದರೂ ಸ್ವಾಗತ ಮಾಡುತ್ತೇವೆ ಎಂದರು.
ಬಿಜೆಪಿ ಕರ್ನಾಟಕದಲ್ಲಿ ದಿವಾಳಿಯಾಗಿದೆ. ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನಗಳಾದರೂ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಕರ್ನಾಟಕದ ಇತಿಹಾಸದಲ್ಲಿ ವಿರೋಧ ಪಕ್ಷಕ್ಕೆ ಇಂಥ ಪರಿಸ್ಥಿತಿ ಎದುರಾಗಿರಲ್ಲಿಲ್ಲ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.
ಇಸ್ರೋಗೆ ಭೇಟಿ ನೀಡಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮಗೆ ಸ್ವಾಗತ ಮಾಡಲು ಆಗಮಿಸುವುದು ಬೇಡ ಎಂದು ಸೂಚಿಸಿದ್ದರು. ಆದ್ದರಿಂದ ನಾವು ಸ್ವಾಗತಕ್ಕೆ ತೆರಳಲಿಲ್ಲ ಎಂದರು.