ಶ್ರೀನಗರ, ಆ 29 (DaijiworldNews/HR): ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಜ್ಜಾಗಿದ್ದ ಪಾಕಿಸ್ತಾನ ಮೂಲದ 14 ಭಯೋತ್ಪಾದಕರ ಆಸ್ತಿಯನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇಬ್ಬರು ಭಯೋತ್ಪಾದಕರ ಆಸ್ತಿಯನ್ನು ಈಗಾಗಲೇ ಮುಟ್ಟುಗೋಲು ಹಾಕಲಾಗಿದ್ದು, ಅಲ್ಲದೇ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಿಂದ ಕಾರ್ಯನಿರ್ವಹಿಸುತ್ತಿರುವ ಇತರ 14 ಭಯೋತ್ಪಾದಕರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.
ಇನ್ನು ಎಲ್ಲಾ ಭಯೋತ್ಪಾದಕರ ಆಸ್ತಿಗಳನ್ನು ಶೀಘ್ರದಲ್ಲೇ ಮುಟ್ಟುಗೋಲು ಹಾಕಿಕೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.