ಬೆಂಗಳೂರು,ಆ 29 (DaijiworldNews/AK): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ತನಿಖಾ ತಂಡಗಳು ನಿಗಮ ವ್ಯಾಪ್ತಿಯಲ್ಲಿ ಜುಲೈ ತಿಂಗಳಲ್ಲಿಟಿಕೆಟ್ ರಹಿತ ಪ್ರಯಾಣಿಸಿದ 2, 832 ಪ್ರಯಾಣಿಕರಿಗೆ ದಂಡ ವಿಧಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಸ್ಆರ್ಟಿಸಿ, ನಿಗಮದ ತನಿಖಾ ತಂಡಗಳು ತಪಾಸಣಾ ಕಾರ್ಯವನ್ನು ಕೈಗೊಂಡು ಒಟ್ಟು2,832ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ. ಎಂದು ಹೇಳಿದೆ.
“ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43,698 ವಾಹನಗಳನ್ನು ತನಿಖೆಗೊಳಪಡಿಸಿ, 2,832 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ.ಇದರಂತೆ ಟಿಕೆಟ್ ರಹಿತ ಪ್ರಯಾಣಿಕರಿಂದ 4, 46,853 ರೂ ದಂಡವನ್ನು ವಸೂಲಿ ಮಾಡಲಾಗಿದೆ ಎಂದು ತಿಳಿಸಿದೆ.
ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ 63,914 ರೂ ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದು, ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ” ಎಂದು ಹೇಳಿದೆ.
ಹೀಗಾಗಿ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ ನಿಗಮ ಮನವಿ ಮಾಡಿದೆ.