ದಾವಣಗೆರೆ, ಆ 29 (DaijiworldNews/AK): ಇತ್ತೀಚೆಗಷ್ಟೇ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದ ಹೊನ್ನಾಳಿ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಸುದ್ದಿ ಹರಡಿತ್ತು. ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಕೆಲವರು ಪಕ್ಷವನ್ನ ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲು ರಿಮೋಟ್ ಕಂಟ್ರೋಲ್ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಎಲ್ ಸಂತೋಷ ವಿರುದ್ಧ ವಾಗ್ದಾಳಿ ನಡೆಸಿದರು.
ಯಡಿಯೂರಪ್ಪ ಕಟ್ಟಿ ಬೆಳೆಸಿದ್ದ ಬಿಜೆಪಿಯನ್ನು ಈಗ ಕಪಿ ಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ನಮ್ಮ ಮುಖಂಡರು ಸೌಜನ್ಯಕ್ಕಾದರೂ ಕರೆ ಮಾಡಿ ಮಾತನಾಡುತ್ತಿಲ್ಲ. ನಮ್ಮನ್ನು ಬಿಜೆಪಿಯಿಂದ ಹೊರ ಕಳಿಸಲು ನೋಡುತ್ತಿದ್ದಾರೆ ಎಂದು ಕಿಡಿಕಾರದರು.
ನನ್ನ ಗಟ್ಟಿ ಧ್ವನಿಯನ್ನು ಯಾರು ಅಡಿಗಿಸಲು ಸಾಧ್ಯವಿಲ್ಲ ಹೇಳಿದ ರೇಣುಕಾಚಾರ್ಯ, ಗೆದ್ದಲು ಹುತ್ತ ಕಟ್ಟಿದರೆ, ಬಂದು ಸೇರಿಕೊಳ್ಳುವಂತಾಗಿದೆ . ಅದೇ ರೀತಿ ಯಡಿಯೂರಪ್ಪ ಕಟ್ಟಿದ ಹುತ್ತದಲ್ಲಿ ಬಂದು ಸೇರಿಕೊಂಡಿದ್ದಾರೆ.
ಈಗ ಬಿಜೆಪಿ ಕಚೇರಿಯಲ್ಲಿ ಕೂತಿರುವವರು ಯಾರು ಪಕ್ಷ ಕಟ್ಟಿಲ್ಲ. ಸದ್ಯ ಪಕ್ಷವನ್ನು ಕರ್ನಾಟಕದವರು ದೆಹಲಿಯಲ್ಲಿ ಕೂತಿದ್ದಾರಲ್ಲ ಅವರು ಕಂಟ್ರೋಲ್ ಮಾಡುತ್ತಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಐದು ಜನ ಮಾತ್ರ ರಾಜ್ಯ ಬಿಜೆಪಿಯನ್ನು ಕಂಟ್ರೋಲ್ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.