ನವದೆಹಲಿ, ಆ 31 (DaijiworldNews/AK): ಕೇಂದ್ರ ಸರ್ಕಾರವು ಸೆಪ್ಟೆಂಬರ್ 18ರಿಂದ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ ಕರೆದಿದೆ ಎಂದು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ಮಾಹಿತಿ ನೀಡಿದ್ದಾರೆ.
ಐದು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದೆ. ಅಮೃತ್ ಕಾಲದ ಮಧ್ಯೆ, ಸಂಸತ್ತಿನಲ್ಲಿ ಫಲಪ್ರದ ಚರ್ಚೆಯನ್ನು ನಡೆಸಲು ಎದುರು ನೋಡುತ್ತಿದ್ದೇನೆ” ಎಂದು ಅವರು ಹೇಳಿದರು.
ಯಾವ ಉದ್ದೇಶಕ್ಕೆ ಈ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಇದುವರೆಗೂ ಸರ್ಕಾರ ಮಾಹಿತಿ ನೀಡಿಲ್ಲ.ಹಳೆಯ ಕಟ್ಟಡದಿಂದ ಹೊಸ ಸಂಸತ್ ಭವನಕ್ಕೆ ಸ್ಥಳಾಂತರ ಪ್ರಕ್ರಿಯೆ ಆರಂಭಿಸಲು ವಿಶೇಷ ಅಧಿವೇಶನ ಕರೆಯಲಾಗುತ್ತಿದೆ ಎಂಬ ಊಹಾಪೋಹವಿದೆ.
ಇನ್ನು ಈ ವಿಶೇಷ ಅಧಿವೇಶನದ ಕರೆಯನ್ನು ಹಲವಾರು ವಿರೋಧ ಪಕ್ಷದ ನಾಯಕರು ಟೀಕಿಸಿದ್ದಾರೆ.