ಅಮರಾವತಿ, ಸ 02 (DaijiworldNews/HR): ಭಾರತದ ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನಿತ್ತ ದೃಷ್ಟಿ ಇಟ್ಟಿದೆ. ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ - ಎಲ್1 ಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಿಷನ್ ಇಂದು ಬೆಳಗ್ಗೆ 11:50ಕ್ಕೆ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಲಾಂಚ್ ಆಗಲಿದೆ.
ಈ ಪ್ರಯೋಗದ ಹಿನ್ನೆಲೆಯಲ್ಲಿ ಶುಕ್ರವಾರ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ಭೇಟಿ ಮಾಡಿ ಸೂಳ್ಳೂರುಪೇಟೆಯ ಚೆಂಗಲಮ್ಮ ಪರಮೇಶ್ವರಿ ಸನ್ನಿಧಿಯಲ್ಲೂ ವಿಶೇಷ ಪೂಜೆ ನಡೆಸಿದೆ.
ಈ ಬಾಹ್ಯಾಕಾಶ ನೌಕೆಯನ್ನು PSLV-C57 ನಿಂದ ಉಡಾವಣೆ ಮಾಡಲಾಗುವುದು. ನೀವು ISRO ವೆಬ್ಸೈಟ್ isro.gov.in, Facebook ಖಾತೆ https://facebook.com/ISRO ಮತ್ತು youtube.com/watch?v=_IcgGYZTXQw ಯೂಟ್ಯೂಬ್ ಚಾನೆಲ್ನಲ್ಲಿ ಈ ಉಡಾವಣೆಯನ್ನು ಲೈವ್ ಆಗಿ ವೀಕ್ಷಿಸಬಹುದಾಗಿದೆ.
ಆದಿತ್ಯ L1 ಅನ್ನು ಸೂರ್ಯ-ಭೂಮಿಯ ವ್ಯವಸ್ಥೆಯ ಲಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾಗುತ್ತದೆ.