ರಾಜಸ್ಥಾನ, ಸ 02 (DaijiworldNews/HR): ಪತಿಯೊಬ್ಬ ತನ್ನ ಪತ್ನಿಯನ್ನೇ ಸಾರ್ವಜನಿಕವಾಗಿ ಥಳಿಸಿ, ವಿವಸ್ತ್ರಗೊಳಿಸಿ ಊರೆಲ್ಲಾ ಮೆರವಣಿಗೆ ಮಾಡಿದ ಘಟನೆ ರಾಜಸ್ಥಾನದ ಪ್ರತಾಪ್ಗಢ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿ ಮಹಿಳೆಯ ಪತಿ, ಅತ್ತೆ ಹಾಗೂ ಮಾವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಂತ್ರಸ್ತ ಮಹಿಳೆ ಕಳೆದ ವರ್ಷ ವಿವಾಹವಾಗಿದ್ದು ಮಹಿಳೆ ನೆರೆಹೊರೆಯ ಪುರುಷನೊಂದಿಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಿ ಆಕೆಯ ಪತಿ ಮತ್ತು ಅತ್ತೆ ಸೇರಿಕೊಂಡು ಮಹಿಳೆಗೆ ಥಳಿಸಿದ್ದಾರೆ.
ಇನ್ನು ಆಕೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದು, ಅಲ್ಲದೆ ಅಮಾನವೀಯ ಘಟನೆಯ ವಿಡಿಯೋ ಕೂಡ ಪತಿಯ ಜೊತೆಗಿದ್ದ ಇತರ ಯುವಕರು ಸೆರೆ ಹಿಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಘಟನೆಗೆ ಸಂಬಂಧಿಸಿ ಮಹಿಳೆಯ ಪತಿ ಅತ್ತೆ ಹಾಗೂ ಮಾವನನ್ನು ವಶಕ್ಕೆ ಪಡೆದುಕೊಂಡ ಪೊಲೀಸರು, ಕೃತ್ಯಕ್ಕೆ ಸಹಕರಿಸಿದ ಇತರ ಏಳು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಒಟ್ಟು 10 ಜನರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಅಶ್ಲೀಲ ಕಾಯ್ದೆ), 354 (ಮಹಿಳೆಯರ ಮೇಲೆ ಹಲ್ಲೆ), 365 (ಅಪಹರಣ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 (ಅಶ್ಲೀಲ ವಸ್ತುಗಳನ್ನು ರವಾನಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.