ನವದೆಹಲಿ, ಸೆ 02 (DaijiworldNews/AK): ಜಿ20 ಶೃಂಗಸಭೆಗೆ ಭಾರತಕ್ಕೆ ಆಗಮಿಸುತ್ತಿರುವ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಸೆಪ್ಟೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಶ್ವೇತ ಭವನದ ಪ್ರಕಟಣೆ ತಿಳಿಸಿದೆ.
ಶೃಂಗಸಭೆಯ ಸಮಯದಲ್ಲಿ ಬೈಡೆನ್ ಜಿ20 ನಾಯಕತ್ವಕ್ಕಾಗಿ ಪ್ರಧಾನಿ ಮೋದಿಯನ್ನು ಶ್ಲಾಘಿಸುತ್ತಾರೆ ಎಂದು ಅದು ತಿಳಿಸಿದೆ. ಸೆಪ್ಟೆಂಬರ್ 9 ಮತ್ತು 10ರಂದು ಜಿ20 ಶೃಂಗಸಭೆ ನಡೆಸಲಿದ್ದು, ಅಮೆರಿಕದ ಅಧ್ಯಕ್ಷರು ಸೆ.7ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಸೆ.8ರಂದು ಅವರು ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಸುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಆರ್ಥಿಕ ಮತ್ತು ಸಾಮಾಜಿಕ ಪರಿಣಾಮಗಳ ಕುರಿತು, ಜಾಗತಿಕ ಸವಾಲುಗಳನ್ನು ಎದುರಿಸುವುದು, ಬಡತನದ ವಿರುದ್ಧ ಉತ್ತಮವಾಗಿ ಹೋರಾಡಲು ವಿಶ್ವ ಬ್ಯಾಂಕ್ ಸೇರಿದಂತೆ ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್ಗಳ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ಮಾತುಕತೆ ನಡೆಯಲಿದೆ ಎಂದು ಶ್ವೇತಭವನ ತಿಳಿಸಿದೆ.