ಹೊಸದಿಲ್ಲಿ, ಸೆ 03 (DaijiworldNews/AK): ಒಂದು ರಾಷ್ಟ್ರ, ಒಂದು ಚುನಾವಣೆ" ಕಲ್ಪನೆಯು ಭಾರತೀಯ ಒಕ್ಕೂಟ ಹಾಗೂ ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ’’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಒಂದು ರಾಷ್ಟ್ರ, ಒಂದು ಚುನಾವಣೆ' ಕಲ್ಪನೆಯು ಒಕ್ಕೂಟ ಹಾಗೂ ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ರಾಹುಲ್ ಗಾಂಧಿ ಈ ಕುರಿತು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ,
ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್ಯತೆಯ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಕೇಂದ್ರ ಸರಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ ನಂತರ ಕಾಂಗ್ರೆಸ್ ಸಂಸದರು ಟ್ವೀಟ್ ಮಾಡಿದ್ದಾರೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಮಿತಿಯಿಂದ ಹೊರಗಿಟ್ಟಿರುವ ಬಗ್ಗೆಯೂ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖರ್ಗೆ ಬದಲಿಗೆ ಪ್ರತಿಪಕ್ಷದ ಮಮಾಜಿ ನಾಯಕ ಗುಲಾಂ ನಬಿ ಆಝಾದ್ ಅವರನ್ನು ಸರಕಾರ ಸಮಿತಿಗೆ ಸೇರಿಸಿದೆ.