ಚೆನ್ನೈ,ಸೆ 04 (DaijiworldNews/AK) : ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನ ನಿರ್ಮೂಲನೆ ಮಾಡಬೇಕೇಹೊರತು,ವಿರೋಧಿಸಬಾರದು ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಮತ್ತೊಂದು ಮತ್ತೊಂದು ಹೇಳಿಕೆ ನೀಡಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರವಾಗಿ ಖಂಡಿಸಿದ್ದಾರೆ. ಇದರ ಬೆನ್ನಲ್ಲೇ ಉದಯನಿಧಿ ನನ್ನ ವಿರುದ್ಧ ಬಿಜೆಪಿ ಕೇಸ್ ಹಾಕಿದ್ರು ಯಾವುದೇ ಕೇಸ್ ಎದುರಿಸಲು ಸಿದ್ಧ ಎಂದು ಸವಾಲು ಹಾಕಿದ್ದಾರೆ.
ನಾನು ಸನಾತನ ಧರ್ಮವನ್ನ ಮಾತ್ರ ಟೀಕಿಸಿದ್ದೇನೆ. ಸನಾತನ ಧರ್ಮವನ್ನ ನಿರ್ಮೂಲನೆ ಮಾಡಬೇಕು ಎಂದು ಮತ್ತೆ ಹೇಳುತ್ತಿದ್ದೇನೆ. ಇದನ್ನ ನಿರಂತರವಾಗಿ ಹೇಳುತ್ತೇನೆ. ಆದ್ರೆ ನಾನು ನರಮೇಧಕ್ಕೆ ಆಹ್ವಾನ ನೀಡಿದ್ದೇನೆ ಎಂದು ಕೆಲವರು ಬಾಲಿಶವಾಗಿ ಮಾತನಾಡುತ್ತಿದ್ದಾರೆ. ಇನ್ನೂ ಕೆಲವರು ದ್ರಾವಿಡರು ನಿರ್ಮೂಲನೆಯಾಗಬೇಕು ಎಂದು ಹೇಳುತ್ತಿದ್ದಾರೆ. ಹಾಗಿದ್ರೆ ಡಿಎಂಕೆ ಪಕ್ಷದವರನ್ನ ಕೊಲ್ಲಬೇಕೇ? ಈ ಹಿಂದೆ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕು ಅಂತಾ ಕರೆ ಕೊಟ್ಟಿದ್ದರು. ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್ಸಿಗರನ್ನು ಕೊಲ್ಲಬೇಕು ಎಂದು ಅರ್ಥವೇ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ನನ್ನ ಹೇಳಿಕೆಯನ್ನ ತಿರುಚಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಬಿಜೆಪಿಗೆ ಒಕ್ಕೂಟವನ್ನ ಕಂಡ್ರೆ ಭಯ. ಐಎನ್ಡಿಐಎ ಮೈತ್ರಿಗೆ ಹೆದರಿ ಹೀಗೆಲ್ಲಾ ಹೇಳುತ್ತಿದೆ. ನಾನು ನರಮೇಧಕ್ಕೆ ಕರೆ ಕೊಟ್ಟಿಲ್ಲ ಎಂದು ಹೇಳಿದರು.