ಬೆಂಗಳೂರು, ಸೆ 04 (DaijiworldNews/MS): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜುಗೊಂಡಿದ್ದು, ಅಂಬಾರಿ ಹೊತ್ತು ಸಾಗುವ ಅಭಿಮನ್ಯ ಸೇರಿ ೧೪ ಆನೆಗಳು ಜಂಬೂ ಸವಾರಿಯಲ್ಲಿ ಭಾಗವಹಿಸಲಿವೆ.
ಈ ಆನೆಗಳ ಸ್ವಾಗತ ಕಾರ್ಯಕ್ರಮ ಕಾರಣಾಂತರಗಳಿಂದ ನಾಳೆಗೆ ಮುಂದೂಡಲಾಗಿದ್ದು ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ 12.01ರಿಂದ 12.51ರ ಅಭಿಜಿತ್ ಲಗ್ನದಲ್ಲಿ ಆನೆಗಳಿಗೆ ಪೂಜೆ ಮಾಡುವ ಮೂಲಕ ಗಜಪಡೆಯ ಸ್ವಾಗತಿಸಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಗಜಪಡೆಯನ್ನು ಬರಮಾಡಿಕೊಳ್ಳುತ್ತಾರೆ.
ಈ ಬಾರಿಯ ದಸರಾ ಮಹೋತ್ಸವದಲ್ಲಿ ಹಿರಿಯ ವಯಸ್ಸಿನ ಆನೆ ಅರ್ಜುನ ಆಗಿದ್ದು, ರೋಹಿತ್ ಅತ್ಯಂತ್ಯ ಕಿರಿಯ ವಯಸ್ಸಿನ ಆನೆಯಾಗಿದೆ.