ನವದೆಹಲಿ, ಸೆ 06 (DaijiworldNews/AK): ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತುಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಉದಯನಿಧಿ ಸ್ಟಾಲಿನ್ ಕರೆ ನೀಡಿದ್ದಕ್ಕಾಗಿ ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಖರ್ಗೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಐಪಿಸಿಯ ಸೆಕ್ಷನ್ 295 ಎ ಮತ್ತು 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ, ಅವರ ಹೇಳಿಕೆಯಿಂದ ಧಾರ್ಮಿಕ ಭಾವನೆಗಳಿಕೆ ಧಕ್ಕೆಯುಂಟಾಗಿದೆ ಎಂದು ದೂರು ದಾಖಲಾಗಿದೆ.