ನವದೆಹಲಿ, ಸೆ 06 (DaijiworldNews/MS): ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಹಾಗೂ ಕರ್ನಾಟಕದ ನಡುವೆ ಕಾನೂನು ಸಮರ ನಡೆಯುತ್ತಿದೆ. ಈ ಪ್ರಕರಣದ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಪ್ರತ್ಯೇಕ ಪೀಠವನ್ನು ಕೂಡ ಸ್ಥಾಪಿಸಿದೆ. ಈ ನಡೆವೆ ಇಂದು ಕಾವೇರಿ ನದಿ ನೀರು ವಿವಾದಕ್ಕೆಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ.
ಕರ್ನಾಟಕ ಕಾವೇರಿ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ ಎಂದು ಆರೋಪಿಸಿ ಸುಪ್ರಿಂಕೋರ್ಟ್ ಮೆಟ್ಟಿಲೇರಿರುವ ತಮಿಳುನಾಡು ಸರ್ಕಾರ, ಹೆಚ್ಚು ನೀರು ಬಿಡುವುದಕ್ಕೆ ಕರ್ನಾಟಕಕ್ಕೆ ಸೂಚಿಸುವಂತೆ ಅರ್ಜಿ ಸಲ್ಲಿಸಿತ್ತು. ಇಂದು ಕೈಗೆತ್ತಿಕೊಂಡ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿಯೊಬ್ಬರ ರಜೆಯಲ್ಲಿ ಹಿನ್ನಲೆಯಲ್ಲಿ ಹೊಸ ಪೀಠಕ್ಕೆ ಮನವಿ ಮಾಡುವಂತೆ ಸೂಚಿಸಿದರು.
ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿ ಮನವಿ ಇದೇ ಪೀಠದಲ್ಲಿ ವಿಚಾರಣೆ ಮುಂದುವರಿಸಿ ಎಂದಾಗ ಬಳಿಕ ವಕೀಲರ ಮನವಿಗೆ ಸ್ಪಂದಿಸಿದ ನ್ಯಾ.ಬಿ.ಆರ್.ಗವಾಯಿ ಸೆ.21ರಂದು ವಿಚಾರಣೆ ನಡೆಸಲು ಸಮ್ಮತಿಸಿದರು. ಅಲ್ಲದೇ ಅಂದೇ ಕರ್ನಾಟಕ ರೈತ ಸಂಘ ಸಲ್ಲಿಸಿದ್ದ ಅರ್ಜಿಯನ್ನೂ ಸಹ ವಿಚಾರಣೆ ಮಾಡುವುದಾಗಿ ಹೇಳಿದ್ದಾರೆ.