ಬೆಂಗಳೂರು, ಸೆ 14 (DaijiworldNews/MS): ತೆರಿಗೆ ವಂಚನೆ, ಸೋರಿಕೆ, ತೆರಿಗೆ ಕಳ್ಳತನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಸೇರಿ ಹಲವು ಇಲಾಖೆಗಳ ಜತೆ ಸಭೆ ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ರಾಜ್ಯದಲ್ಲಿ ತೆರಿಗೆ ಸಂಗ್ರಹದ ಪ್ರಗತಿ ಹೆಚ್ಚಿಸಿ ಎಂದು ಹೇಳಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.19.2ರಷ್ಟಿದೆ. ಹಾಗಾಗಿ ತೆರಿಗೆ ಸಂಗ್ರಹ ದರ ದೇಶದಲ್ಲೇ ಹೆಚ್ಚಾಗಿರುವುದಕ್ಕೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರೂ, ತೆರಿಗೆ ಸಂಗ್ರಹ ಗುರಿಯನ್ನು ದಾಟಿ ಸಾಧನೆ ಮಾಡುವ ಅವಕಾಶಗಳಿವೆ. ಇದನ್ನು ಸಾಧಿಸಿ ತೋರಿಸಿ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.
್ಹೆಚ್ಚು ತೆರಿಗೆ ಸಂಗ್ರಹ ಮಾಡಿದರೆ ಅಭಿವೃದ್ಧಿ ಕೆಲಸ ಮಾಡಲು ಅನುಕೂಲವಾಗುತ್ತದೆ. ಸಾಮೂಹಿಕ ಜವಾಬ್ದಾರಿಯ ಹೊತ್ತು ಎಲ್ಲರೂ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ.
SDRF ಹಾಗೂ NDRF ನಿಯಮ ಪ್ರಕಾರ 195 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. ಬರದ ಬಗ್ಗೆ ಎಲ್ಲಾ ರೀತಿಯ ಸರ್ವೆ ಮಾಡಿಸಿ ವರದಿ ಪಡೆದಿದ್ದು, ಬರ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಕೇಂದ್ರ ಸರ್ಕಾರಕ್ಕೆ ನಾವು ಬರೆದಿರುವ ಪತ್ರಕ್ಕೆ ಉತ್ತರ ಕೊಟ್ಟಿಲ್ಲ ಎಂದು ಹೇಳಿದ್ದಾರೆ.