ಬೆಂಗಳೂರು, ಸೆ 17 (DaijiworldNews/HR): ಗೂಂಡಾ ಕಾಯ್ದೆಯಡಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿಯನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಪುನೀತ್ ಕೆರೆಹಳ್ಳಿ ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿಯಾಗಿದ್ದು, ಈತನ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಎರಡು, ಡಿಜೆ ಹಳ್ಳಿ, ಕಗ್ಗಲೀಪುರ, ಹಂಪಿ, ಮಳವಳ್ಳಿ, ಹಲಸೂರು, ಚಾಮರಾಜಪೇಟೆ, ಎಲೆಕ್ಟ್ರಾನ್ ಸಿಟಿ, ಸಾತನೂರು ಪೊಲೀಸ್ ಠಾಣೆಗಳಲ್ಲಿ ಒಂದೊಂದು ಪ್ರಕರಣ ದಾಖಲಾಗಿವೆ.
ಇನ್ನು ಈತನಿಗೆ ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿದ್ದು, ಅಪರಾಧ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.
ಪುನೀತ್ ಬಂಧಿಸುವಂತೆ ಕಮಿಷನರ್ ಆದೇಶ ಹೊರಡಿಸಿದ್ದರು. ಆಗಸ್ಟ್ 11 ರಂದು ರಾತ್ರಿ ಪುನೀತ್ ನನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದ್ದು, ಇದೀಗ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.