ಹೊಸದಿಲ್ಲಿ,ಸೆ 18 (DaijiworldNews/AK): ತಮಿಳುನಾಡಿಗೆ ಮತ್ತೆ ಐದು ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸೂಚಿಸಲಾಗಿದೆ.
ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸೋಮವಾರ ಸಭೆ ನಡೆಸಿದ್ದು, ಈ ಸಭೆಯಲ್ಲಿ ಪ್ರತಿ ದಿನ ಐದು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಲಾಗಿದ್ದು, ಸೆಪ್ಟೆಂಬರ್ 12ರ ಆದೇಶದಂತೆ 15 ದಿನ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ.
ಅಲ್ಲದೇ ಕಾವೇರಿ ನೀರು ನಿಯಂತ್ರಣ ಮಂಡಳಿ ಸಮಿತಿಯ ಆದೇಶ ಪಾಲನೆಗೆ ಸಭೆಯಲ್ಲಿ ಖಡಕ್ ಸೂಚನೆ ನೀಡಿದ್ದು, ಸಮಿತಿ ಆದೇಶ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಲಾಗಿದೆ.
ಕರ್ನಾಟಕದ ಕಾವೇರಿ ಜಲಾನಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಬರದ ತೀವ್ರತೆಯನ್ನು ಗಮನಿಸಿ, ಕುಡಿಯುವ ನೀರಿನ ಅಗತ್ಯೆಗಳು ಮತ್ತು ನೀರಿನ ಅಗತ್ಯ ಇರುವುದರಿಂದ ಜಲಾಶಯಗಳಿಗೆ ಒಳ ಹರಿವು ಸುಧಾರಿಸಿದ ಹೊರತು ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಕರ್ನಾಟಕವು ಮನವಿ ಸಲ್ಲಿಸಿತು.
ಇದಕ್ಕೆ ಪ್ರತಿಯಾಗಿ ತಮಿಳುನಾಡು ಮುಂದಿನ 15 ದಿನಗಳವರೆಗೆ ಒಟ್ಟು 12,500 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿತು.ಇನ್ನು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆ ಸೆ.26ರಂದು ನಡೆಯಲಿದೆ.