ಮಣಿಪುರ, ಸೆ 26 (DaijiworldNews/HR): ಇಬ್ಬರು ವಿದ್ಯಾರ್ಥಿಗಳನ್ನು ಶಂಕಿತ ಶಸ್ತ್ರಧಾರಿಗಳು ಹತ್ಯೆ ಮಾಡಿದ ಬಳಿಕ ಮಣಿಪುರದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಐದು ದಿನಗಳ ಕಾಲ ಸ್ಥಗಿತಗೊಳಿಸಿದೆ.
ನೂರಾರು ವಿದ್ಯಾರ್ಥಿಗಳು ಬೀದಿಗಿಳಿದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸಿದ್ದು, ಇಬ್ಬರು ವಿದ್ಯಾರ್ಥಿಗಳ ಶವದ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಪ್ರತಿಭಟನೆಗಳು ನಡೆಯುತ್ತಿದೆ.
ಇನ್ನು ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆ (ಸೆಪ್ಟೆಂಬರ್ 27)ಯಿಂದ ಸೆಪ್ಟೆಂಬರ್ 29(ಶುಕ್ರವಾರ) ವರೆಗೆ ರಜೆ ಘೋಷಿಸಲಾಗಿದೆ.
ಅಕ್ಟೋಬರ್ 10 ರ ಸಂಜೆ 7:45 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಐದು ದಿನಗಳ ಕಾಲ ಮಣಿಪುರ ರಾಜ್ಯದ ಪ್ರಾದೇಶಿಕ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಡೇಟಾ ಸೇವೆಗಳು, ಇಂಟರ್ನೆಟ್, ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ನಿಗ್ರಹಿಸಲು ನಿರ್ಧರಿಸಿದೆ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೇಳಿದೆ.