ಚಿಕ್ಕಮಗಳೂರು, ಸೆ 30 (DaijiworldNews/HR): ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ.
ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾಳೆ.
ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821